ಮಾರ್ಕನು ಬರೆದ ಸುಸಂದೇಶಗಳು - TopicsExpress



          

ಮಾರ್ಕನು ಬರೆದ ಸುಸಂದೇಶಗಳು 4:16-20 "ಇನ್ನು ಕೆಲವರು ದೇವರ ವಾಕ್ಯವನ್ನು ಕೇಳುತ್ತಾರೆ ಮತ್ತು ಸಂತೋಷದಿಂದ ಅದನ್ನು ಬೇಗನೆ ಸ್ವೀಕರಿಸಿಕೊಳ್ಳುತ್ತಾರೆ. ಆದರೆ ಆ ವಾಕ್ಯವು ತಮ್ಮಲ್ಲಿ ಆಳವಾಗಿ ಬೇರೂರಲು ಅವರು ಅವಕಾಶ ನೀಡುವುದಿಲ್ಲ. ಅವರು ಆ ವಾಕ್ಯವನ್ನು ಸ್ವಲ್ಪಕಾಲ ಮಾತ್ರ ಸ್ವೀಕರಿಸಿಕೊಂಡಿರುತ್ತಾರೆ. ಆ ವಾಕ್ಯದ ದೆಸೆಯಿಂದ ತೊಂದರೆಯಾಗಲಿ ಹಿಂಸೆಯಾಗಲಿ ಬಂದಾಗ ಅವರು ಅದನ್ನು ಬಹುಬೇಗನೆ ತ್ಯಜಿಸುತ್ತಾರೆ. ಇವರೇ ಬೀಜಬಿದ್ದ ಬಂಡೆಯ ನೆಲವಾಗಿದ್ದಾರೆ. "ಇನ್ನು ಕೆಲವರು ಮುಳ್ಳಿನ ಗಿಡಗಳ ನೆಲದಂತಿರುವರು. ಈ ಜನರು ವಾಕ್ಯವನ್ನು ಕೇಳುತ್ತಾರೆ. ಆದರೆ ಈ ಜೀವಿತದ ಚಿಂತೆಗಳು, ಹಣದ ಮೇಲಿನ ವ್ಯಾಮೋಹ ಮತ್ತು ಇತರ ಎಲ್ಲಾ ವಿಧವಾದ ಆಸೆಗಳು ಅವರಲ್ಲಿ ಬಿದ್ದ ವಾಕ್ಯಕ್ಕೆ ಬೆಳೆಯಲು ಅವಕಾಶ ಕೊಡುವುದಿಲ್ಲ. ಆದ್ದರಿಂದ ಅವರ ಜೀವಿತದಲ್ಲಿ ವಾಕ್ಯವು ಫಲ ಫಲಿಸುವುದಿಲ್ಲ. ಇನ್ನು ಕೆಲವರು ಬೀಜಬಿದ್ದ ಒಳ್ಳೆಯ ನೆಲದಂತಿದ್ದಾರೆ. ಅವರು ವಾಕ್ಯವನ್ನು ಸ್ವೀಕರಿಸಿಕೊಂಡು ಫಲವನ್ನು ಫಲಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ಮೂವತ್ತರಷ್ಟು ಹೆಚ್ಚಾಗಿ, ಇನ್ನು ಕೆಲವು ಸಂದರ್ಭಗಳಲ್ಲಿ ಅರವತ್ತರಷ್ಟು ಹೆಚ್ಚಾಗಿ, ಮತ್ತೆ ಕೆಲವು ಸಂಧರ್ಭಗಳಲ್ಲಿ ನೂರರಷ್ಟು ಹೆಚ್ಚಾಗಿ ಫಲ ಫಲಿಸುತ್ತಾರೆ” ಎಂದು ಹೇಳಿದನು." Mark 4:16-20 "And these are the ones sown on rocky ground: the ones who, when they hear the word, immediately receive it with joy. And they have no root in themselves, but endure for a while; then, when tribulation or persecution arises on account of the word, immediately they fall away. And others are the ones sown among thorns. They are those who hear the word, but the cares of the world and the deceitfulness of riches and the desires for other things enter in and choke the word, and it proves unfruitful. But those that were sown on the good soil are the ones who hear the word and accept it and bear fruit, thirtyfold and sixtyfold and a hundredfold."
Posted on: Wed, 25 Sep 2013 04:02:26 +0000

Trending Topics



Hellraisin-Hometown-Honky-Tonk-Heros-topic-10204872329585067">Calling ALL of our Hellraisin Hometown Honky Tonk Heros &
A Christmas Story When I was young our family always went to

Recently Viewed Topics




© 2015