ಇನ್ನು ಬೆಂಗಳೂರಿನಲ್ಲೂ ಹೊಸ - TopicsExpress



          

ಇನ್ನು ಬೆಂಗಳೂರಿನಲ್ಲೂ ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಮೊನ್ನೆಯಷ್ಟೇ ಚರ್ಚ್ ಸ್ಟ್ರೀಟ್ನಲ್ಲಿ ಬಾಂಬ್ ಸ್ಫೋಟದಿಂದ ಬೆಂಗಳೂರಿಗರು ಆತಂಕಗೊಂಡಿದ್ದು, ಜನರ ಆತಂಕ ದೂರಮಾಡಲು ಪೊಲೀಸರು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಇವತ್ತು ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಜನರಿಗೆ ಯಾವುದೇ ರೀತಿಯ ಭದ್ರತಾ ಸಮಸ್ಯೆ ಕಾಡದಂತೆ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ವಲಯ ಡಿಸಿಪಿ ಸಂದೀಪ್ ಪಾಟೀಲ್, ಭದ್ರತೆಗಾಗಿ ಇದೇ ಮೊದಲಬಾರಿಗೆ ಡ್ರೋನ್ ಕ್ಯಾಮರಾಗಳನ್ನ ಬಳಸುತ್ತಿದ್ದೇವೆ ಎಂದಿದ್ದಾರೆ. ಈಗಾಗ್ಲೇ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ವಾಚಿಂಗ್ ಟವರ್ಗಳನ್ನ ನಿರ್ಮಿಸಲಾಗಿದೆ. ಇದೇವೇಳೆ, ಮಹಿಳೆಯರಿಗೆ ಕಿರುಕುಳ ನೀಡುವವರ ವಿರುದ್ಧ, ಮದ್ಯ ಸೇವಿಸಿ ಗಲಾಟೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳೋದಾಗಿ ಸಂದೀಪ್ ಪಾಟೀಲ್ ಹೇಳಿದ್ದಾರೆ. ಹೊಸ ವರ್ಷಾಚರಣೆಗೆ ರಾತ್ರಿ 1 ಗಂಟೆಯವರೆಗೆ ಸಮಯ ನಿಗದಿಪಡಿಸಲಾಗಿದ್ದು, ಜನ ವಿನಾಕಾರಣ ಪೊಲೀಸರ ಜೊತೆ ವಾಗ್ವಾದ ನಡೆಸಬಾರದು ಅಂತ ಮನವಿ ಮಾಡಿದ್ದಾರೆ. ---------- ಇನ್ನು, ಈಗಾಗ್ಲೇ ಎಂಜಿ ರೋಡ್, ಬ್ರಿಗೇಡ್ ರೋಡ್ ಹಾಗೂ ಚರ್ಚ್ ಸ್ಟ್ರೀಟ್ನಲ್ಲಿ ಬಾಂಬ್ ನಿಷ್ಕ್ರಿಯ ದಳ ತಪಾಸಣೆ ನಡೆಸಿದೆ. ಪ್ರಮುಖ ಪ್ರದೇಶಗಳಲ್ಲಿ ತಪಾಸಣೆ ಮುಂದುವರಿಸಲು ತೀರ್ಮಾನಿಸಲಾಗಿದೆ.
Posted on: Wed, 31 Dec 2014 12:30:05 +0000

Trending Topics



Recently Viewed Topics




© 2015