ನವದೆಹಲಿ: ಅಕ್ರಮ ಆಸ್ತಿ - TopicsExpress



          

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಷರತ್ತುಬದ್ಧ ಜಾಮೀನು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಕೋರ್ಟ್ ಜಯಲಲಿತಾ ಅವರಿಗೆ 4 ವರ್ಷ ಶಿಕ್ಷೆ ವಿಧಿಸಿತ್ತು. ಪ್ರಕರಣ ಸಂಬಂಧ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಅಕ್ಟೋಬರ್ 7ರಂದು ಅರ್ಜಿಯನ್ನು ವಜಾಗೊಳಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಹಾಗೂ ತಮಗೆ ಜಾಮೀನು ಮಂಜೂರು ಮಾಡುವಂತೆ ಕೋರಿ ಜಯಲಲಿತಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಜಯಲಲಿತಾ ಅವರಿಗೆ ಜಾಮೀನು ಮಂಜೂರು ಮಾಡಿದ್ದು, 21 ದಿನಗಳ ನಂತರ ಜಯಲಲಿತಾ ಅವರಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ವಿಶೇಷ ಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾಗಿರುವ ಮೇಲ್ಮನವಿಗೆ ಸಂಬಂಧಪಟ್ಟ ದಾಖಲೆಗಳನ್ನು ಹೈಕೋರ್ಟ್‌ಗೆ ಜಯಾ ಅವರು ಡಿಸೆಂಬರ್ 18ರೊಳಗಾಗಿ ಸಲ್ಲಿಸಬೇಕು. ದಾಖಲೆಗಳನ್ನು ಸಲ್ಲಿಸಲು 1 ದಿನ ತಡವಾದರೂ ಜಾಮೀನು ರದ್ದುಗೊಳಿಸುವುದಾಗಿ ಸುಪ್ರೀಂ ಕೋರ್ಟ್ ಎಚ್ಚರಿಸಿದೆ.
Posted on: Fri, 17 Oct 2014 07:32:22 +0000

Trending Topics



Recently Viewed Topics




© 2015